ಮನೆ ರಾಜ್ಯ ಮೈಸೂರಿನ ಅಭಿವೃದ್ಧಿ ಕುರಿತು ಮೋದಿಗೆ ಮನವಿ ಪತ್ರ ಸಲ್ಲಿಸಿದ ಶಾಸಕ ಜಿಟಿಡಿ

ಮೈಸೂರಿನ ಅಭಿವೃದ್ಧಿ ಕುರಿತು ಮೋದಿಗೆ ಮನವಿ ಪತ್ರ ಸಲ್ಲಿಸಿದ ಶಾಸಕ ಜಿಟಿಡಿ

0

ಮೈಸೂರು (Mysuru): ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಅವರು ಭೇಟಿಯಾಗಿ ಮೈಸೂರಿನ ಅಭಿವೃದ್ಧಿಯ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು.

ಮನವಿ ಪತ್ರದಲ್ಲಿನ ಮುಖ್ಯಾಂಶಗಳು ಇಂತಿವೆ. ಮೈಸೂರು ನಗರವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸಂಚಾರ ದಟ್ಟಣೆಯನ್ನು ನಿವಾರಿಸಲು ಮೈಸೂರಿಗೆ ಮೈಟ್ರೋ ರೈಲಿನ ಅವಶ್ಯಕತೆಯಿದೆ. ಮೈಸೂರಿನ ನಾಗರಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಮೈಸೂರು ನಗರದೊಂದಿಗೆ ಸಂಪರ್ಕಿಸುವ ರೈಲು ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಿ. ಇದು ಕರ್ನಾಟಕದ ದಕ್ಷಿಣ ತುದಿಯಿಂದ ಕೇರಳ ಮತ್ತು ತಮಿಳುನಾಡಿಗೆ ಸರಕು ಮತ್ತು ಉತ್ಪನ್ನಗಳ ತ್ವರಿತ ಚಲನೆಗೆ ಸಹಾಯ ಮಾಡುತ್ತದೆ, ರಾಜ್ಯದಲ್ಲಿ ಕೃಷಿ ಅಭಿವೃದ್ಧಿ ಕಾರ್ಯಗಳನ್ನು ಕ್ರೋಢೀಕರಿಸಲು ಕರ್ನಾಟಕದ ಎಲ್ಲಾ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಸಂಸದರಾದ ಪ್ರತಾಪ್‌ ಸಿಂಹ, ಸಚಿವರಾದ ಡಾ.ಕೆ.ಸುಧಾಕರ್, ಶಾಸಕರಾದ ಎಲ್.ನಾಗೇಂದ್ರ, ಮಹಾಪೌರರಾದ ಸುನಂದಾ ಪಾಲನೇತ್ರ ಅವರು ಉಪಸ್ಥಿತರಿದ್ದರು.