ಮನೆ ಸುದ್ದಿ ಜಾಲ ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನ

ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಗೌರಿ ನಿಧನ

0

ಮೈಸೂರು (Mysuru)-ಶಾಸಕರಾದ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಜಿ.ಡಿ.ಹರೀಶ್‌ ಗೌಡ ಅವರ ಪುತ್ರಿ 3 ವರ್ಷದ ಗೌರಿ ಶನಿವಾರ ನಿಧನ ಹೊಂದಿದ್ದಾಳೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಗೌರಿ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿ ರಾತ್ರಿ 12.30ರ ವೇಳೆಗೆ ನಿಧನ ಹೊಂದಿದ್ದಾಳೆ.

ಮೈಸೂರು ತಾಲೂಕಿನ ಗುಂಗಾಲ್ ಛತ್ರದ ತೋಟದ ಮನೆಯಲ್ಲಿ ಇಂದು ಮಧ್ಯಾಹ್ನ 12ಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗೌರಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್‌ ಮತ್ತು ಕುಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಹಿಂದಿನ ಲೇಖನಪಿಎಸ್‌ ಐ ಹಗರಣದಲ್ಲಿ ಗೃಹ ಸಚಿವರೇ ಬಲಿಪಶು ಆಗುತ್ತಾರೆ: ಪ್ರಿಯಾಂಕ್‌ ಖರ್ಗೆ
ಮುಂದಿನ ಲೇಖನಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ನಂಬರ್‌ ಪ್ಲೇಟ್‌ ನಿಯಮ ವಿಚಾರಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ