ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದು. ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯದಲ್ಲಿ ಕೆಟ್ಟ ಆಡಳಿತವಿಟ್ಟುಕೊಂಡು ಕಾಂಗ್ರೆಸ್ ತುಮಕೂರಿನಲ್ಲಿ ಸಾಧನಾ ಸಮಾವೇಶ ಮಾಡಿದೆ. ಅಲ್ಪಸಂಖ್ಯಾತರನ್ನು ಓಲೈಸಿ ಹಿಂದುಳಿದವರು ಹಾಗೂ ದಲಿತರನ್ನು ಕಡೆಗಣಿಸಲಾಗುತ್ತಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸರಿಯಾದ ವ್ಯವಸ್ಥೆ ಮಾಡಿಕೊಂಡಿಲ್ಲ.
ಹಾಗೂ ಮೂರು ವರ್ಷಗಳಲ್ಲಿ ಸಾಕಷ್ಟು ಬೆಲೆ ಏರಿಕೆ ಮಾಡಿದ್ದು ದಲಿತರ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗಿದೆ. ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ ಮಾಡಿದ್ದನ್ನು ಮರೆತು ಸಮಾವೇಶ ಮಾಡಿದ್ದು ನಾಚಿಕೆಗೇಡು’ ಎಂದು ಹರಿಹಾಯ್ದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲದಲ್ಲಿ ಗಿನ್ನೆಸ್ ದಾಖಲೆ ಮಾಡಿದ್ದಾರೆ. ಮುಖ್ಯಮಂತ್ರಿ ಕುಟುಂಬ ಮೂಡಾ ಹಗರದಲ್ಲಿ ಸಿಲುಕಿದೆ. ಚುನಾವಣೆ ಬಂದಾಗ ಮಾತ್ರ ಗ್ಯಾರಂಟಿ ಹಣ ಕೊಡಲಾಗುತ್ತಿದೆ. ಗುತ್ತಿಗೆದಾರರು ಭ್ರಷ್ಟಾಚಾರಕ್ಕೆ ನಲುಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.’ ಎಂದರು. ಆದರಿಂದ ‘ಅಂಜನಾದ್ರಿ ಬೆಳೆದರೆ ತಮಗೆ ತೊಂದರೆ ಆಗುತ್ತದೆ ಎಂಬ ಕೆಟ್ಟ 3 ರಕ್ಕಾಗಿ ಸಂಸದ ರಾಜಶೇಖರ ಹಿಟ್ನಾಳ ಆಂಜನಾದ್ರಿಗೆ ನನ್ನದ ಆಭರಣ ಕೊಟ್ಟವರಿಗೆ ವ್ಯಂಗ್ಯ ಮಾಡಿದ್ದಾರೆ. ಸಮಾಜಕ್ಕೆ ತಪ್ಪು ಮಾಹಿತಿ ನೀಡುವವರಿಗೆ ಅಂಜನಾದ್ರಿಯ ಆಂಜನೇಯನೇ ಶಿಕ್ಷೆ ಕೊಡುತ್ತಾನೆ’ ಎಂದು ಹೇಳಿದರು ಎನ್ನಲಾಗಿದೆ.
















