ಮನೆ ರಾಜಕೀಯ ಹರವೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿರಂಜನ್‌ಕುಮಾರ್ ಚಾಲನೆ

ಹರವೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿರಂಜನ್‌ಕುಮಾರ್ ಚಾಲನೆ

0

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರವೆ ಭಾಗದ ಅರಳಿಕಟ್ಟೆ ಹಾಗೂ ಮಲೆಯೂರು ಗ್ರಾಮದಲ್ಲಿ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ವಾಸಿಸುವ ಬಡಾವಣೆಗಳಿಗೆ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಅಭಿವೃದ್ದಿ ನಿಮಗದ ಅಧ್ಯಕ್ಷ ಸಿ.ಎನ್. ನಿರಂಜನಕುಮಾರ್ ಶನಿವಾರ ಚಾಲನೆ ನೀಡಿದರು.
ತಾಲೂಕಿನ ಅರಳಿಕಟ್ಟೆ ಗ್ರಾಮದ ಪರಿಶಿಷ್ಟ ಜಾತಿ ಬೀದಿಯಲ್ಲಿ ೨೦ ಲಕ್ಷ ರೂ. ಮಲೆಯೂರಿನ ಪರಿಶಿಷ್ಟ ಜಾತಿ ಬೀದಿಯಲ್ಲಿ ೩೫ ಲಕ್ಷ ರೂ. ಹಾಗೂ ಮಲೆಯೂರು ಗ್ರಾಮದ ಪರಿಶಿಷ್ಟ ಪಂಗಡದವರು ವಾಸಿಸುವ ಬೀದಿಯಲ್ಲಿ ೨೦ ಲಕ್ಷ ರೂ. ವೆಚ್ಚಗಳಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವವೇ ಆರಂಭವಾಗಿದೆ. ಕಳೆದ ಮೂರುವರೆ ವರ್ಷಗಳ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯ ಬಹಳಷ್ಟು ಗ್ರಾಮಗಳಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ವಾಸಿಸುವ ಬಡಾವಣೆ ಮತ್ತು ಬೀದಿಗಳಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿಗಳನ್ನು ನಿರ್ಮಾಣ ಮಾಡಿ, ನಿವಾಸಿಗಳಿಗೆ ಹೆಚ್ಚಿನ ಅನುಕೂಲವನ್ನು ಕಲ್ಪಿಸಲಾಗಿದೆ. ಅದ್ಯತೆ ಮೇರೆಗೆ ಅನುದಾನದ ಲಭ್ಯತೆಯಂತೆ ಅಯಾ ಗ್ರಾಮಗಳಿಗೆ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸಿದ ಕ್ಷೇತ್ರವನ್ನು ಮಾದರಿ ಮಾಡುವ ಗುರಿ ನಮ್ಮದಾಗಿದೆ ಎಂದರು.
ಈಗಾಗಲೇ ನಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುವ ಹರವೆ ಹೋಬಳಿಯ ೫ ಪಂಚಾಯಿತಿಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ವರ್ಗದವರು ವಾಸಿಸುವ ಬಡಾವಣೆಗಳನ್ನು ಗುರುತಿಸಿ ಹರವೆ ಭಾಗಕ್ಕೆ ೮ ಕೋಟಿಗೂ ಹೆಚ್ಚು ಅನುದಾನವನ್ನು ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ನೀಡಿದ್ದೇವೆ. ಇತರೇ ಯೋಜನೆಯಡಿಯಲ್ಲಿ ಇತರೇ ವರ್ಗದವರು ವಾಸಿಸುವ ರಸ್ತೆಗಳನ್ನು ಅಭಿವೃದ್ದಿ ಪಡಿಸಲಾಗಿದೆ. ಕ್ಷೇತ್ರಾದ್ಯಂತ ಪ್ರವಾಸ ಮಾಡಿ, ಜನ ಸಂಪರ್ಕ ಸಭೆಗಳನ್ನು ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿ, ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆಲಸ ಕಾರ್ಯಗಳು ನಮ್ಮ ಕ್ಷೇತ್ರದಲ್ಲಿ ನಡೆಯುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನವನ್ನು ಬಳಕೆ ಮಾಡಿಕೊಂಡು ಕ್ಷೇತ್ರದ ಜನರ ಸಮಸ್ಯೆಯನ್ನು ಬಗೆಹರಿಸುವುದು ನನ್ನ ಮೊದಲ ಅದ್ಯತೆಯಾಗಿದೆ. ಜನರು ಸಹ ನೇರವಾಗಿ ನನ್ನನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ನಿರಂಜನ್‌ಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಮಲೆಯೂರು ರವಿಶಂಕರ್, ಚುಡಾ ಅಧ್ಯಕ್ಷ ಶಾಂತಮೂರ್ತಿ, ಮುಖಂಡರಾದ ಮಲೆಯೂರು ನಾಗೇಂದ್ರ, ಸುನಿಲ್, ಹೀರಿಗಾಟಿ ಸೋಮಶೇಖರ್, ಮಹೇಂದ್ರ, ಚಿಕ್ಕಬಸಪ್ಪ, ಅಪ್ತ ಸಹಾಯಕ ಮಹದೇವಸ್ವಾಮಿ ಮೊದಲಾಧವರು ಇದ್ದರು.

ಹಿಂದಿನ ಲೇಖನಸಾವಿನ ಬಳಿಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ನರ್ಸ್ ಗಾನವಿ
ಮುಂದಿನ ಲೇಖನಸಚಿವ ವಿ.ಸೋಮಣ್ಣರಿಂದ ಸಂಸದರ ಭೇಟಿ: ಜಿಲ್ಲೆಯ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ