ಚಾಮರಾಜನಗರ: ವಿಧಾನಸಭೆ ಉಪಸಭಾಪತಿಯಾಗಲು ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ಒಂದು ವರ್ಷದ ನಂತರ ಸಚಿವ ಸ್ಥಾನ ನೀಡುವುದಾಗಿ ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಹೀಗಾಗಿ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದಿದ್ದಾರೆ.
ನಾನು ಕಾಂಗ್ರೆಸ್ ಕಟ್ಟಾಳು . ವರಿಷ್ಠರು ಹೇಳಿದಂತೆ ಕೇಳುವೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾದರೂ ಹೇಳಿಕೊಳ್ಳುವ ಆಗಿಲ್ಲ. ವರಿಷ್ಠರು ಹೇಳಿದರೇ ಒಪ್ಪಬೇಕು. ಹೈಕಮಾಂಡ್ ಕೊಟ್ಟಿದ್ದನ್ನು ನಿಭಾಯಿಸುತ್ತೇನೆ ಎಂದು ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದರು.