ಬೆಂಗಳೂರು\ಕಾರವಾರ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದಾಗಿದೆ.
ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಸತೀಶ್ ಸೈಲ್ ಬಂಧನವಾಗಿತ್ತು. ಅನಾರೋಗ್ಯ ಕಾರಣದಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಈಗ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಮತ್ತೆ ಜೈಲಿಗೆ ಹೋಗಲಿದ್ದಾರೆ.
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಕೋಟ್ಯಂತರ ರೂ. ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪ ಪ್ರಕರಣದಲ್ಲಿ ಸೆಪ್ಟೆಂಬರ್‌ನಲ್ಲಿ ಸತೀಶ್ ಸೈಲ್‌ರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ನ್ಯಾಯಾಲಯದ ಮುಂದೆ ಹಾಜರುಪಡಿಸಿ 2 ಬಾರಿ ಕಸ್ಟಡಿಗೆ ಪಡೆಯಲಾಗಿತ್ತು ಎಂದು ಹೇಳಲಾಗಿದೆ.















