ಮನೆ ರಾಷ್ಟ್ರೀಯ ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ: ಕ್ರೀಡಾ ಸಚಿವರಿಂದ 1 ಕೋಟಿ ರೂ....

ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ: ಕ್ರೀಡಾ ಸಚಿವರಿಂದ 1 ಕೋಟಿ ರೂ. ಬಹುಮಾನ ಘೋಷಣೆ

0

ನವದೆಹಲಿ (New Delhi)-ಇದೇ ಮೊಟ್ಟ ಮೊದಲ ಬಾರಿಗೆ ಥಾಮಸ್ ಕಪ್ (Thomas Cup) ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಿದ್ದಾರೆ.

ಈ ಮಧ್ಯೆ ವಿಜೇತ ಭಾರತ ತಂಡಕ್ಕೆ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಥೈಲ್ಯಾಂಡ್ ರಾಷ್ಟ್ರದ ಬ್ಯಾಂಕಾಕ್‌ ಇಂಪ್ಯಾಕ್ಟ್ ಅರೆನಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿ ಥಾಮಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಮೋದಿ ಅವರು ತಂಡದೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಭಿನಂದಿಸಿದ್ದಾರೆ. ಜೊತೆಗೆ ಟ್ವೀಟ್‌ ಮಾಡಿ, ಭಾರತೀಯ ಬ್ಯಾಡ್ಮಿಂಟನ್ ತಂಡವು ಇತಿಹಾಸವನ್ನು ಸೃಷ್ಟಿಸಿದೆ. ಭಾರತ ಥಾಮಸ್ ಕಪ್ ಗೆದ್ದ ನಂತರ ಇಡೀ ದೇಶವೇ ಸಂಭ್ರಮಿಸಿದೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಆಟಗಾರರಿಗೆ ಸ್ಫೂರ್ತಿಯಾಗಲಿದೆ ಎಂದಿದ್ದಾರೆ.

ಠಾಕೂರ್ ಅವರು ಟ್ವೀಟ್ ಮಾಡಿ, ಇತಿಹಾಸ ಸೃಷ್ಟಿಯಾಗಿದೆ. ಥಾಮಸ್ ಕಪ್ ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಅಭಿನಂದನೆಗಳು. ಮಲೇಷ್ಯಾ, ಡೆನ್ಮಾರ್ಕ್ ಮತ್ತು ಇಂಡೋನೇಷ್ಯಾವನ್ನು ಸೋಲಿಸುವ ಮೂಲಕ ಈ ಅಸಾಮಾನ್ಯ ಸಾಧನೆಯನ್ನು ಸಾಧಿಸಿದ ತಂಡವು ದೇಶದ ಸಮಾನ ಮನ್ನಣೆಗೆ ಅರ್ಹವಾಗಿದೆ ಎಂದಿದ್ದಾರೆ. ಭಾರತ ತಂಡಕ್ಕೆ ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.