ಮನೆ ರಾಜ್ಯ ಮೋದಿ ಅವರೇ, ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೋದಿ ಅವರೇ, ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

0

ಬೆಂಗಳೂರು: ನರೇಂದ್ರ ಮೋದಿ ಅವರೇ, ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Join Our Whatsapp Group

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್‌ ನಲ್ಲಿ ನಡೆದ ‘ಪ್ರಜಾಧ್ವನಿ-2’ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ.

ಸಂಸದ ಡಿ.ಕೆ. ಸುರೇಶ್ ಅವರು ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸುರೇಶ್‌ ಅವರು ಗೆದ್ದರೆ ಮಾತ್ರ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಬೆಲೆ ಏರಿಕೆ ಭಾರತೀಯರ ಶತ್ರು. ನಾನು ಪ್ರಧಾನಿಯಾದರೆ ಬೆಲೆ ಏರಿಕೆ ತಡೆಯುವುದಾಗಿ ಹೇಳಿ ದೇಶದ ಜನರನ್ನು  ಮೋದಿ ಅವರು ನಂಬಿಸಿದ್ದರು. ಆದರೆ, ಇದೇ ಮೋದಿಯವರು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಸೇರಿ ಎಲ್ಲದರ ಬೆಲೆಯನ್ನೂ ಗಗನಕ್ಕೆ ಏರಿಸಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮೋದಿಯವರ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಮಧ್ಯಮ ವರ್ಗದ ಜನ ಮತ್ತು ದುಡಿಯುವ ವರ್ಗಗಳು ಹಾಗೂ ಬಡ ಜನರ ಬದುಕಿಗೆ ಸ್ಪಂದಿಸುವ ಉದ್ದೇಶದಿಂದ ನಾನು ಐದು ಗ್ಯಾರಂಟಿಗಳನ್ನು ರೂಪಿಸಿ ಐದನ್ನೂ ಜಾರಿ ಮಾಡಿದ್ದೇವೆ. ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ‌. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಹಿಂದಿನ ಲೇಖನಕೋವಿಡ್ ಲಸಿಕೆ ಅಭಿಯಾನದ ವಿರುದ್ಧ ಕರಪತ್ರ: ಎಫ್ಐಆರ್ ರದ್ದತಿಗೆ ಕಲ್ಕತ್ತಾ ಹೈಕೋರ್ಟ್ ನಕಾರ
ಮುಂದಿನ ಲೇಖನಭಯೋತ್ಪಾದನಾ ಚಟುವಟಿಕೆ: ಜಮ್ಮು ಮತ್ತು ಕಾಶ್ಮೀರ, ಶ್ರೀನಗರದ ಒಂಬತ್ತು ಸ್ಥಳಗಳಲ್ಲಿ ಎನ್‌ ಐಎ ದಾಳಿ