ಮನೆ ಸುದ್ದಿ ಜಾಲ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ – ಉದಿತ್‌ ರಾಜ್‌

ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ – ಉದಿತ್‌ ರಾಜ್‌

0

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ಉಪಮುಖ್ಯಮಂತ್ರಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದ ಕಾಂಗ್ರೆಸ್ ಶಾಸಕ ಹೆಚ್.ಡಿ.ರಂಗನಾಥ್‌ಗೆ ನೋಟಿಸ್‌ ಕುರಿತು ಮಾತನಾಡಿ, ಯಾವುದೇ ಸಂಘರ್ಷ ನಡೆಯುತ್ತಿಲ್ಲ. ಇದು ಎಲ್ಲಾ ಪಕ್ಷಗಳಲ್ಲೂ ನಡೆಯುತ್ತದೆ.

ಕೆಲವರು ತಮ್ಮ ಆಪ್ತರನ್ನು ಹೊಗಳುತ್ತಾರೆ. ಇತರರು ಹಾಗೆಯೇ ಮಾಡುತ್ತಾರೆ. ಹಾಗಾದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಹೇಳಿದ್ದರೆ, ಅದು ನಿಜವಾಗಿಯೂ ಸಂಘರ್ಷ ಇದೆ ಎಂದರ್ಥವೇ ಎಂದು ಪ್ರಶ್ನಿಸಿದ್ದಾರೆ.