ನವದೆಹಲಿ : ಡೊನಾಲ್ಡ್ ಟ್ರಂಪ್ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ರಂಪ್ ಅವರ 24 ಗಂಟೆಗಳ ಅಂತಿಮ ಗಡುವು ನೀಡಿದಾಗ, ಐದು ಗಂಟೆಗಳಲ್ಲಿ ಪ್ರಧಾನಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿಯವರ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ನಾಯಕಿ ಮತ್ತು ಮುಂಬೈ ಬಿಜೆಪಿಯ ಸಹ-ಸಂಚಾಲಕಿ ಪಲ್ಲವಿ ಸಿಟಿ, ಮೋದಿಜಿ ಟ್ರಂಪ್ ಅವರ ಮಾತು ಕೇಳಿ ಆಪರೇಷನ್ ಸಿಂಧೂರ್ ಅನ್ನು ನಿಲ್ಲಿಸಿದ್ದರೆ, ಟ್ರಂಪ್ ಭಾರತದ ಮೇಲೆ ಸುಂಕ ವಿಧಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ರಾಹುಲ್ ಗಾಂಧಿ ಸ್ಥಳೀಯ ಗೂಂಡಾಗಳಂತೆ ಮಾತನಾಡುತ್ತಾರೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಕುಟುಕಿದ್ದಾರೆ.














