ಮನೆ ಕ್ರೀಡೆ ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

0

ಐಸಿಸಿ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

ಏಷ್ಯಾಕಪ್​ ಫೈನಲ್ ​ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್ 7 ಓವರ್ ​ಗಳಲ್ಲಿ 21 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ 8 ಸ್ಥಾನ ಮೇಲೇರಿದ್ದಾರೆ.

ಅಂದರೆ ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದರು. ಇದೀಗ ಏಕಾಏಕಿ ಮೇಲೇರಿ ಅಗ್ರಸ್ಥಾನಕ್ಕೆ ತಲುಪಿರುವುದು ವಿಶೇಷ. ಅದರಂತೆ ಪ್ರಸ್ತುತ ಏಕದಿನ ಬೌಲರ್ ​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಬೌಲರ್ ​ಗಳ ಪಟ್ಟಿ ಈ ಕೆಳಗಿನಂತಿದೆ.

ಮೊಹಮ್ಮದ್ ಸಿರಾಜ್ (ಭಾರತ): ಕಳೆದ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದ ಸಿರಾಜ್ ಈ ಬಾರಿ 8 ಸ್ಥಾನ ಜಿಗಿತ ಕಂಡಿದ್ದಾರೆ. ಈ ಮೂಲಕ ಒಟ್ಟು 694 ರೇಟಿಂಗ್ ಪಡೆದು ಅಗ್ರಸ್ಥಾನ ಅಲಂಕರಿಸಿದ್ದಾರೆ.

ಜೋಶ್ ಹ್ಯಾಝಲ್ ​ವುಡ್ (ಆಸ್ಟ್ರೇಲಿಯಾ): ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಹ್ಯಾಝಲ್​ವುಡ್ ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್): ಕಿವೀಸ್​ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್): ಅಫ್ಘಾನ್ ಸ್ಪಿನ್ನರ್ ಮುಜೀಬ್ ಒಟ್ಟು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ರಶೀದ್ ಖಾನ್ (ಅಫ್ಘಾನಿಸ್ತಾನ್): ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

ಮಿಚೆಲ್ ಸ್ಟಾರ್ಕ್​ (ಆಸ್ಟ್ರೇಲಿಯಾ): ಕಳೆದ ಬಾರಿ 3ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಈ ಬಾರಿ 652 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್): ಕಿವೀಸ್ ತಂಡದ ವೇಗಿ ಮ್ಯಾಟ್ ಹೆನ್ರಿ ಈ ಬಾರಿ ಒಂದು ಸ್ಥಾನ ಜಿಗಿತ ಕಂಡಿದ್ದು, ಒಟ್ಟು 645 ಅಂಕಗಳೊಂದಿಗೆ 7ನೇ ಸ್ಥಾನ ಅಲಂಕರಿಸಿದ್ದಾರೆ.

ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಸ್ಪಿನ್ನರ್ ಆ್ಯಡಂ ಝಂಪಾ ಒಟ್ಟು 642 ಅಂಕಗಳೊಂದಿಗೆ ಈ ಬಾರಿ 8ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಲ್ದೀಪ್ ಯಾದವ್ (ಭಾರತ): ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಈ ಬಾರಿ 3 ಸ್ಥಾನ ಕುಸಿತ ಕಂಡಿದ್ದು, 638 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.

ಶಾಹೀನ್ ಅಫ್ರಿದಿ (ಪಾಕಿಸ್ತಾನ್): ಪಾಕ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಒಟ್ಟು 632 ಅಂಕಗಳೊಂದಿಗೆ ಟಾಪ್-10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.