ಮನೆ ರಾಷ್ಟ್ರೀಯ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ

0

ಭೋಪಾಲ್: ಉಜ್ಜೈನಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಮೋಹನ್ ಯಾದವ್ ಅವರು ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಭೋಪಾಲ್‌ ನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ್ದು,  ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಧ್ಯಪ್ರದೇಶ ಉಪ ಮುಖ್ಯಮಂತ್ರಿಗಳಾಗಿ ಬಿಜೆಪಿ ನಾಯಕರಾದ ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

58 ವರ್ಷದ ಮೋಹನ್ ಯಾದವ್  ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮೋಹನ್ ಯಾದವ್ ಉಜ್ಜಯಿನಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಅವರು ಮೊದಲು 2013 ರಲ್ಲಿ ಶಾಸಕರಾಗಿ ಆಯ್ಕೆಯಾದರು. ಆನಂತರ 2018 ರಲ್ಲಿ ಎರಡನೇ ಬಾರಿಗೆ ಅದೇ ಸ್ಥಾನವನ್ನು ಗೆದ್ದರು. ಹೆಸರಾಂತ ಉದ್ಯಮಿಯೂ ಆಗಿರುವ ಇವರು ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ.