ಬೆಂಗಳೂರು: ಬಂಗಾಳಕೊಲ್ಲಿದಲ್ಲಿ ಉಂಟಾದ ಮೋಕಾ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಪರಿಣಾಮ ಬಿರಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಮೇ 13ರಂದು ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲೂ ಮಳೆ, ದಕ್ಷಿಣ ಒಳನಾಡಿನ ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ರಾಮನಗರ, ಚಾಮರಾಜನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು, ರಾಜ್ಯದಲ್ಲಿ ಮೋಕಾ ಚಂಡಮಾರುತದ ಎಫೆಕ್ಟ್ ಮೂರು ದಿನಗಳ ಕಾಲ ಇರಲಿದ್ದು, ಮೂರನೇ ದಿನ ಹೆಚ್ಚು ಮಳೆಯಾಗುವ ಸಧ್ಯತೆ ಇದೆ. ಸದ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯಾತೆ ಇದೆ. ಗಾಳಿಯ ಪ್ರಮಾಣ ಹೆಚ್ಚಾಗಿ ಇರಲಿದೆ ಎಂದು ಹವಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.














