ಮನೆ ರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ: ವಿಚಾರಣೆಗೆ ಹಾಜರಾಗುವಂತೆ ನಟಿ ಜಾಕ್ವೆಲಿನ್ ಮತ್ತೆ ಸಮನ್ಸ್

ಹಣ ಅಕ್ರಮ ವರ್ಗಾವಣೆ: ವಿಚಾರಣೆಗೆ ಹಾಜರಾಗುವಂತೆ ನಟಿ ಜಾಕ್ವೆಲಿನ್ ಮತ್ತೆ ಸಮನ್ಸ್

0

ನವದೆಹಲಿ(Newdelhi): ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸೋಮವಾರ ದೆಹಲಿ ಪೊಲೀಸ್‌ ಇಲಾಖೆಯ ಆರ್ಥಿಕ ಅಪರಾಧಗಳ ತಡೆ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

ಸುಕೇಶ್ ಚಂದ್ರಶೇಖರ್ ₹200 ಕೋಟಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಕೇಳಿಬಂದಿತ್ತು. ಅಲ್ಲದೆ ನಟಿ, ಸುಕೇಶ್ ಅವರಿಂದ ದುಬಾರಿ ಮೊತ್ತದ ಉಡುಗೊರೆ ಪಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ಬುಧವಾರವೂ ಅವರು ದೆಹಲಿ ಪೊಲೀಸ್‌ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದರು.

ಹಣ ಅಕ್ರಮ ವರ್ಗಾವಣೆ ಮತ್ತು ವಂಚನೆ ಪ್ರಕರಣದಲ್ಲಿ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.