ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್ ಆ್ಯಪ್ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಅವರಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಕೋರ್ಟ್ ಸೂಚಿಸಿದೆ
ಇದರೊಂದಿಗೆ ಶುದ್ಧವಾದ ಆಹಾರ, ನೀರು, ಮೆಡಿಸಿನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ
ವಿರೇಂದ್ರ ಪಪ್ಪಿ ಇಡಿ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಡಿ ಪರ ವಕೀಲ ಪ್ರಮೋದ್ ಚಂದ್ರ ವಾದ ಮಂಡಿಸಿದ್ರೆ, ಆರೋಪಿ ವಿರೇಂದ್ರ ಪಪ್ಪಿ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರು ಎನ್ನಲಾಗಿದೆ.














