ಮನೆ ಹವಮಾನ ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ

ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ

0

ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಮಾಡಲಿದ್ದು, ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ಮೇ 31, ಜೂನ್ 1ರಂದು ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯಕ್ಕೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಹಿಂದಿನ ಲೇಖನಸಿದ್ದರಾಮಯ್ಯ ಸಂಪುಟದ ಖಾತೆ ಹಂಚಿಕೆ: ಅಸಮಾಧಾನ ಶಮನ
ಮುಂದಿನ ಲೇಖನರಸ್ತೆಯಲ್ಲಿ ಮಹಿಳಾ ಕುಸ್ತಿಪಟುಗಳನ್ನು ಎಳೆದೊಯ್ದ ಪೊಲೀಸರು: ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದ ಸಾಕ್ಷಿ ಮಲಿಕ್