ಮನೆ ರಾಜಕೀಯ ಜುಲೈ 15ರಿಂದ ಜುಲೈ 26ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ

ಜುಲೈ 15ರಿಂದ ಜುಲೈ 26ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ

0

 ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರ ಅಧಿವೇಶಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.

Join Our Whatsapp Group

ಇನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಡಳಿತದಲ್ಲಿನ ಲೋಪ ಎತ್ತಿ ಸರ್ಕಾರ ಮೇಲೆ ಮುಗಿಬೀಳಲು ಸಜ್ಜಾಗಿವೆ. ಅದರಲ್ಲೂ ಮುಖ್ಯವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಲಿವೆ.

ಈ ಮುಂಗಾರು ಅಧಿವೇಶಷನದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ. ಇಂಧನ, ಹಾಲ ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿವೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ.

ಮತ್ತೊಂದೆಡೆ ಆಡಳಿತರೂಢ  ಕಾಂಗ್ರೆಸ್ ಸರ್ಕಾರ, ವಿಪಕ್ಷಗಳ ಆರೋಪ, ಪ್ರಶ್ನೆಗಳನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ  ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ