ಮನೆ ರಾಜ್ಯ ಆಗಸ್ಟ್ 11 ರಿಂದ ಆರಂಭವಾಗಲಿದೆ ವಿಧಾನಮಂಡಲದ ಮುಂಗಾರು ಅಧಿವೇಶನ: ರಾಜ್ಯಪಾಲರಿಂದ ಅಧಿಸೂಚನೆ

ಆಗಸ್ಟ್ 11 ರಿಂದ ಆರಂಭವಾಗಲಿದೆ ವಿಧಾನಮಂಡಲದ ಮುಂಗಾರು ಅಧಿವೇಶನ: ರಾಜ್ಯಪಾಲರಿಂದ ಅಧಿಸೂಚನೆ

0

ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 11 ರಿಂದ ಆರಂಭಗೊಳ್ಳಲಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್11 ರಿಂದ 22 ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ ಎಂದಿದೆ.

ಭಾರತ ಸಂವಿಧಾನದ 174 ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ 2025 ರ ಆಗಸ್ಟ್ 11 ರಂದು ಸೋಮವಾರ ಪೂರ್ವಾಹ್ನ 11 ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಆಗಸ್ಟ್‌ 11 ರ ಸೋಮವಾರ ಮೊದಲ ದಿನ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ. ಆಗಸ್ಟ್ 11 ರಿಂದ ಆರಂಭಗೊಂಡು ಆಗಸ್ಟ್ 22‌ ರ ವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.