ಮನೆ ರಾಜ್ಯ ರಾಜ್ಯ ಸರ್ಕಾರದಿಂದ ಉದ್ಯೋಗ ಸೃಷ್ಟಿಗೆ ಹೆಚ್ಚು ಅವಕಾಶ: ಸಚಿವ ಕೆ.ಗೋಪಾಲಯ್ಯ

ರಾಜ್ಯ ಸರ್ಕಾರದಿಂದ ಉದ್ಯೋಗ ಸೃಷ್ಟಿಗೆ ಹೆಚ್ಚು ಅವಕಾಶ: ಸಚಿವ ಕೆ.ಗೋಪಾಲಯ್ಯ

0

ಮಂಡ್ಯ(Mandya): ರಾಜ್ಯದಲ್ಲಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಅವಕಾಶಗಳನ್ನು ರಾಜ್ಯ ಸರ್ಕಾರ ಹೆಚ್ಚಾಗಿ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ನಗರದ ಪಿಇಎಸ್ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿಂದು ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದರಿ ಮೇಳದಲ್ಲಿ 120 ಕಂಪನಿಗಳು ಹೆಸರು ನೊಂದಾಯಿಸಿಕೊAಡಿದ್ದು, 8 ಸಾವಿರ ಯುವಕ-ಯುವತಿಯರು  ಉದ್ಯೋಗ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದರು.

ಇಲ್ಲಿ ಎಷ್ಟು ಜನಕ್ಕೆ ಉದ್ಯೋಗ ಕೊಡಬೇಕೊ ಅಷ್ಟು ಜನರಿಗೆ ಉದ್ಯೋಗ ಅವಕಾಶ ನೀಡಲಾಗುವುದು, ಉಳಿದವರಿಗೆ ಮುಂದಿನ ಉದ್ಯೋಗ ಮೇಳದಲ್ಲಿ ಅವಕಾಶ ಕಲ್ಪಿಸಲಾಗುವುದು. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ನೇತೃತ್ವದಲ್ಲಿ  ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು. ಜಿಲ್ಲೆಯ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸಲು ಮುಂದಾಗಿರುವುದಾಗಿ ತಿಳಿಸಿದರು.

ಜನ ಸಂಕಲ್ಪ ಯಾತ್ರೆ: ಮಂಡ್ಯ ಜಿಲ್ಲೆಯ ಏಳು ಕಡೆಗಳಲ್ಲಿ ಜನಸಂಕಲ್ಪ ಯಾತ್ರೆ ಆಯೋಜಿಸಲಾಗಿದೆ. ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಲಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಒಳ್ಳೆಯ ಕಾರ್ಯಕ್ರಮಗಳನ್ನು ನೀಡಿವೆ. ಯಡಿಯೂರಪ್ಪ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಲ್ಲಾ ರೀತಿಯ ಸಿದ್ದತೆ ಈಗಾಗಲೇ ನಡೆಯುತ್ತಿವೆ ಎಂದು ಹೇಳಿದರು.

ಹಿಂದಿನ ಲೇಖನವರದಕ್ಷಿಣೆ ಕಿರುಕುಳ ಆರೋಪ: ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ
ಮುಂದಿನ ಲೇಖನಜಿ.ಪಂ, ತಾ.ಪಂ. ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್