ಮನೆ ರಾಜ್ಯ ರಾಯಚೂರು ಬಾಲಕಿಯರ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು ಬಾಲಕಿಯರ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

0

ರಾಯಚೂರು: ಬಾಲಕಿಯರ ವಸತಿ ನಿಲಯದಲ್ಲಿ ಭಾನುವಾರ ಮಧ್ಯಾಹ್ನದ ಆಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿ ಪಟ್ಟಣದಲ್ಲಿ ನಡೆದಿದೆ.

ಜಿಲ್ಲೆಯ ಮಾನವಿ ಪಟ್ಟಣದ ಫಾತಿಮಾ ನಗರದಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿ ನಿನ್ನೆ ಮಧ್ಯಾಹ್ನ ವಿದ್ಯಾರ್ಥಿನಿಯರಿಗೆ ಊಟವಾಗಿ ಪಲಾವ್ ಅನ್ನ, ಟೊಮೆಟೋ ಚಟ್ನಿ ಹಾಗೂ ಮೊಟ್ಟೆ ನೀಡಿದ್ದರು. ಇದನ್ನು ವಿದ್ಯಾರ್ಥಿನಿಯರು ಸೇವಿಸಿದ್ದಾರೆ. ಆದರೆ ಸಂಜೆ ವೇಳೆಗೆ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ-ಬೇದಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡು ಬಳಲಿದ್ದಾರೆ.

ತಕ್ಷಣವೇ ವಿದ್ಯಾರ್ಥಿಯರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ‌ ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ.

ಘಟನೆಗೆ ಹಾಸ್ಟೆಲ್ ವಾರ್ಡನ್​ ಅವರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿರುವ ಆರೋಪಿಸಿರುವ ಮಕ್ಕಳ ಪೊಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.