Saval TV on YouTube
ಮುಂಬೈ: ಮಹಾರಾಷ್ಟ್ರ ರಾಜ್ಯ ಮೀಸಲು ಪೊಲೀಸ್ ಪಡೆಯ 18,331 ಕಾನ್’ಸ್ಟೆಬಲ್, ಚಾಲಕ ಹಾಗೂ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ 11 ಲಕ್ಷಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಅಸಂಖ್ಯಾತ ಆಕಾಂಕ್ಷಿಗಳು ಒಂದೇ ಬಾರಿಗೆ ಅರ್ಜಿ ಸಲ್ಲಿಸಲು ಯತ್ನಿಸುತ್ತಿರುವ ಕಾರಣ ಸರ್ಕಾರಿ ವೆಬ್’ಪೋರ್ಟಲ್’ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಸದ್ಯ ಅದನ್ನು ಸರಿಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ.9ರಿಂದ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಬುಧವಾರ (ನ.30) ಕೊನೆಯ ದಿನವಾಗಿದೆ. ಸೋಮವಾರ ಮಧ್ಯಾಹ್ನದವರೆಗೆ 10.74 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ ಎಂದು ತಿಳಿಸಿದ್ದಾರೆ.















