ಮನೆ ಅಪರಾಧ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ತಲೆ ಬುರುಡೆಗಳು ಪತ್ತೆ

ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ತಲೆ ಬುರುಡೆಗಳು ಪತ್ತೆ

0

ರಾಮನಗರ: ಬಿಡದಿ ಬಳಿಯ ಜೋಗರದೊಡ್ಡಿ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಮನುಷ್ಯನ ತಲೆ ಬುರುಡೆಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ತೋಟದ ಮನೆಯಲ್ಲಿ ತಲೆಬುರುಡೆಗಳು ಪತ್ತೆಯಾಗಿದೆ.

ಬಲರಾಮ್ ಎಂಬ ವ್ಯಕ್ತಿ ಮೇಲೆ ಬುರುಡೆ ಸಂಗ್ರಹ ಆರೋಪವಿದ್ದು, ಮಾಟಮಂತ್ರಕ್ಕೆ ಇವುಗಳನ್ನು ಬಳಕೆ ಮಾಡುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬಲರಾಮ್ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದ. ಇದನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬಿಡದಿ ಪೊಲೀಸರು ಸ್ಮಶಾನಕ್ಕೆ ಎಂಟ್ರಿ ಕೊಟ್ಟ ಬಲರಾಮ್ ನನ್ನು ಬಂಧಿಸಿದ್ದಾರೆ.

ವಿಚಾರಣೆಯ ವೇಳೆ ಬಲರಾಮ್, ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಿದ್ದೇವೆ ಎಂದಿದ್ದಾನೆ. ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.