ಮನೆ ಆರೋಗ್ಯ ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು

0

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದು ಅಸ್ವಸ್ಥರಾಗಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ಭಾನುವಾರ ನಡೆದಿದೆ.

Join Our Whatsapp Group

ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್ಪಾಡಾಗಿತ್ತು. ಊಟದ ನಂತರ ಐಸ್​ ಕ್ರೀಂ ಸೇವಿಸಿದವರಿಗೆ ಅರ್ಧ ಗಂಟೆಯ ಬಳಿಕ ವಾಂತಿ, ಭೇದಿ ಶುರುವಾಗಿದೆ. ಯಾರಬ್​ ನಗರ ಹಾಗೂ ಕೋಟೆ ನಿವಾಸಿಗಳಾದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.