ಮನೆ ಸುದ್ದಿ ಜಾಲ ಮತದಾನಕ್ಕೆ 700ಕ್ಕೂ ಹೆಚ್ಚು ಸ್ವಯಂ ಸೇವಕರು ನಿಯೋಜನೆ

ಮತದಾನಕ್ಕೆ 700ಕ್ಕೂ ಹೆಚ್ಚು ಸ್ವಯಂ ಸೇವಕರು ನಿಯೋಜನೆ

0

ವಿಶೇಷಚೇತನರು, ಗರ್ಭಿಣಿಯರು, ಬಾಣಂತಿಯರು, ಹಿರಿಯ ನಾಗರೀಕರನ್ನು ಒಳಗೊಂಡ ಮತದಾರರ ಮತದಾನಕ್ಕೆ ಸಹಾಯ ಮಾಡಲು 700ಕ್ಕೂ ಹೆಚ್ಚಿನ ಸ್ವಯಂ ಸೇವಕರನ್ನು ಜನರ ಸಹಾಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

Join Our Whatsapp Group

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಯುಕ್ತಾಶ್ರಯದಲ್ಲಿ ಚಾಮರಾಜ, ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಮತಗಟ್ಟೆಗಳ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತಗಟ್ಟೆಗಳಲ್ಲಿ ವಿಶೇಷಚೇತನರು, ಹಿರಿಯನಾಗರಿಕರಿಗೆ ವ್ಹೀಲ್ ಚೇರ್ ಕೊಟ್ಟು ನೆರವಾಗುವುದು. ಕುಡಿಯುವ ನೀರು ಒದಗಿಸಿಕೊಡುವುದು ಹಾಗೂ ನಿರೀಕ್ಷಣಾ ಕೊಠಡಿಯಲ್ಲಿ ಆಸನ ವ್ಯವಸ್ಥೆ ಮಾಡುವುದು. ಸರತಿ ಸಾಲುಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮತಗಟ್ಟೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನಿಗಾವಹಿಸುವುದು. ಒಂದಕ್ಕಿಂತ ಹೆಚ್ಚು ಮತದಾನ ಕೇಂದ್ರವಿರುವ ಶಾಲೆಯ ಮತಗಟ್ಟೆಯಲ್ಲಿ ಯಾವ ಮತಗಟ್ಟೆಯ ಮತದಾರರು ಎಂಬ ಪೂರ್ವ ಮಾಹಿತಿಯನ್ನು ಮತದಾರರಿಗೆ ನೀಡುವುದು. ಇವೆ ಮೊದಲಾದ ಸೇವೆಗಳನ್ನು ಸಲ್ಲಿಸಲು ಎನ್ಎಸ್ಎಸ್ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡ ಹಾಗೂ ಇತರೆ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಸೇವೆ ಒದಗಿಸಲಿದ್ದಾರೆ ಎಂದು ಹೇಳಿದರು.

ಮತಗಟ್ಟೆ ಅಧಿಕಾರಿಗಳಿಗೆ ಸಹಕಾರಿಯಾಗುವ ಜತೆಗೆ ಮತದಾರರು ಸೂಸುತ್ರವಾಗಿ ತಮ್ಮ ಹಕ್ಕು ಚಲಾಯಿಸುವ ವಾತಾವರಣ ಪೂರಕವಾಗಿ ಕರ್ತವ್ಯ ನಿರ್ವಹಿಸುವುದು. ಸೇರಿ ತಮ್ಮ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕಾರಿಯೂ ಆಗಿರುವ ಕೆ.ಎಂ.ಗಾಯಿತ್ರಿ ಅವರು ಮಾತನಾಡಿ, ಚುನಾವಣೆ ಒಂದು ಮಹತ್ವದ ಕಾರ್ಯವಾಗಿದ್ದು, ಮತಗಟ್ಟೆಯಲ್ಲಿ ವಿದ್ಯಾರ್ಥಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸಿದರು. ಈ ದಿಸೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಸೂಚನೆ ನೀಡಿದರು.

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಗಣೇಶ್ಕುಮಾರ್ ವಿದ್ಯಾರ್ಥಿಗಳ ಮತಗಟ್ಟೆಯಲ್ಲಿ ಎನೆಲ್ಲಾ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಸುಮಾರು 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಮಾಹಿತಿ ಪಡೆದುಕೊಂಡರು. ಜತೆಗೆ ಸೂಸುತ್ರವಾಗಿ ಚುನಾವಣೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡುವುದಾಗಿ ಇದೇ ವೇಳೆ ತಿಳಿಸಿದರು.

ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ಎ.ಮಲ್ಲೇಶ್ವರಿ, ಕೃಷ್ಣ, ಸಿ.ಎನ್.ರಾಜು ಸೇರಿ ಇತರರು ಹಾಜರಿದ್ದರು.