ಮನೆ ಅಪರಾಧ ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

0

ಚಿಕ್ಕಮಗಳೂರು: ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಕಂದಮ್ಮನನ್ನು ಹೆತ್ತ ತಾಯಿಯೇ ಬಿಟ್ಟು ಹೋಗಿದ್ದು, ಗುರುವಾರ ಬೆಳಗ್ಗಿನ ಜಾವ 6 ಗಂಟೆಯ ಸಮಯದಲ್ಲಿ ಮಗು ಅಳುವ ಸದ್ದು ಕೇಳಿಸಿದೆ. ಗಂಟೆಗಳು ಕಳೆದರೂ ಕೂಡ ಮಗುವಿನ ಅಳು ನಿಲ್ಲದಿದ್ದಾಗ ತನ್ನ ಮಗಳನ್ನು ಕರೆದುಕೊಂಡು ಬಂದು ನೋಡಲು ಮೈ ಮೇಲೆ ಬಟ್ಟೆಯೇ ಇಲ್ಲದೆ ತೋಟದ ಒಂದು ಮೂಲೆಯಲ್ಲಿ ಅಳುತ್ತಿರುವ ಮಗು ಕಂಡು ಬಂದಿದೆ.

ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಆಯಾಗೆ ವಿಷಯ ತಿಳಿಸಿ ಸ್ಥಳಕ್ಕೆ ಡಾಕ್ಟರನ್ನು ಕರೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.