ಮನೆ ರಾಜಕೀಯ ನ್ಯಾಯ ಕೊಡಿಸಿ ಎಂದು ಅಮ್ಮ, ಮಗಳು ನನ್ನ ಬಳಿ ಬಂದಿದ್ದರು: ಬಿ ಎಸ್​ ಯಡಿಯೂರಪ್ಪ

ನ್ಯಾಯ ಕೊಡಿಸಿ ಎಂದು ಅಮ್ಮ, ಮಗಳು ನನ್ನ ಬಳಿ ಬಂದಿದ್ದರು: ಬಿ ಎಸ್​ ಯಡಿಯೂರಪ್ಪ

0

ಬೆಂಗಳೂರು: ನ್ಯಾಯ ಕೊಡಿಸಿ ಎಂದು ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು ಎಂದು ಮಾಜಿ ಸಿಎಂ, ಬಿಜೆಪಿ ನಾಯಕ ಬಿ ಎಸ್​ ಯಡಿಯೂರಪ್ಪ ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್​ಐಆರ್​ ಬಗ್ಗೆ ನೀಡಿದ್ದು,    ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ. ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ. ಇರಲಿ ಎದುರಿಸೋಣ. ನಾನು ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಏನಿದು ಪ್ರಕರಣ?

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.

ಹಿಂದಿನ ಲೇಖನಚುನಾವಣಾ ಬಾಂಡ್‌ ಗಳ ಮಾಹಿತಿ ಬಹಿರಂಗ ಪಡಿಸಿದ ಚುನಾವಣಾ ಆಯೋಗ
ಮುಂದಿನ ಲೇಖನಬಿಎಸ್‍’ವೈ ವಿರುದ್ಧ ದೂರು: ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ಸಿಕ್ಕಿದ್ದು, ತನಿಖೆ ನಡೆಸುತ್ತೇವೆ: ಡಾ. ಪರಮೇಶ್ವರ್