ಮೈಸೂರು : ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ. ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೊದಲು ತಾಯಿ ನೀಲಮ್ಮಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ವೇಳೆ ತಾಯಿಯನ್ನು ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ.
ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯುತ್ ಇಲಾಖೆ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.














