ಮನೆ ರಾಜ್ಯ ಒಂದೇ ಪರೀಕ್ಷಾ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ತಾಯಿ-ಮಗ

ಒಂದೇ ಪರೀಕ್ಷಾ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ತಾಯಿ-ಮಗ

0

ಯಾದಗಿರಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಒಂದೇ ಪರೀಕ್ಷೆ ಕೇಂದ್ರದಲ್ಲಿ ತಾಯಿ-ಮಗ ಒಟ್ಟಿಗೆ ಪರೀಕ್ಷೆ ಬರೆಯುತ್ತಿರುವ ಅಪರೂಪದ ಪ್ರಸಂಗಕ್ಕೆ ಯಾದಗಿರಿ ಸಾಕ್ಷಿಯಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ತಾಯಿ ಗಂಗಮ್ಮ (32) ಹಾಗೂ ಆಕೆಯ ಮಗನಾದ ಮಲ್ಲಿಕಾರ್ಜುನ ಒಂದೇ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವುದು ಅಪರೂಪದ ಕ್ಷಣವಾಗಿದೆ.

2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ತನ್ನ ಮಗನೊಟ್ಟಿಗೆ ಬರೆಯುತ್ತಿರುವುದು ಸಂತಸ ತಂದಿದೆ ಎಂದು ಗಂಗಮ್ಮ ಸಂತಸ ಹಂಚಿಕೊಂಡರು.

ಮಗ ಮಲ್ಲಿಕಾರ್ಜುನ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದು, ಶಹಾಪುರ ತಾಲೂಕಿನ ಸಗರ ಪರೀಕ್ಷಾ ಕೇಂದ್ರದಲ್ಲಿ ತಾಯಿಯೊಡನೆ ಪರೀಕ್ಷೆ ಬರೆಯುತ್ತಿದ್ದಾನೆ.

ಪ್ರಥಮ ಭಾಷೆ ಪರೀಕ್ಷೆಯಾಗಿದ್ದು, ಸರತಿ ಸಾಲಿನಲ್ಲಿ ನಿಂತು ತಾಯಿ ಗಂಗಮ್ಮ ಪರೀಕ್ಷಾ ನೋಂದಣಿ ಸಂಖ್ಯೆಯನ್ನು‌ ಹುಡುಕಿ, ಪರೀಕ್ಷಾ ಕೊಠಡಿಗೆ ತೆರಳಿದರು.

ಹಿಂದಿನ ಲೇಖನಆಸ್ತಿ ತೆರಿಗೆ ಸಂಗ್ರಹದಲ್ಲಿ ಯಾವುದೇ ಹೆಚ್ಚಳವಿಲ್ಲ: ಬಿಬಿಎಂಪಿ ಸ್ಪಷ್ಟನೆ
ಮುಂದಿನ ಲೇಖನನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ