ಮನೆ ರಾಜ್ಯ ರೇಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಸವರಾಜ್ ಬೊಮ್ಮಾಯಿ

ರೇಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಸವರಾಜ್ ಬೊಮ್ಮಾಯಿ

0

ಗದಗ: ನಗರದ ಗಂಗಾಪುರ ಪೇಟೆ ಹೊಂಬಳ ರೇಲ್ವೆ ಸೇತುವೆ  ನಿರ್ಮಾಣ ಕಾಮಗಾರಿಯನ್ನು ಸಂಸದ ಬಸವರಾಜ್ ಬೊಮ್ಮಾಯಿ ವೀಕ್ಷಿಸಿದರು.

Join Our Whatsapp Group

ಗದಗ-ಹೊಂಬಳಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ  2017 ರಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದ್ದು, ಸ್ಥಳೀಯರ ವಿರೋಧ ಹಾಗೂ ತಾಂತ್ರಿಕ ಕಾರಣದಿಂದ ಕುಂಟುತ್ತ ಸಾಗಿದೆ.

ಈ ಹಿನ್ನಲೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಸಂಸದರು ಸಮಸ್ಯೆ ಬಗೆಹರಿಸಿ ಕಾಮಗಾರಿಗೆ ಅನುಕೂಲ ಮಾಡುಕೊಂಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಚಂದ್ರ ಲಮಾಣಿ, ಅಧಿಕಾರಿಗಳು ಉಪಸ್ಥಿತರಿದ್ದರು.