ಮನೆ ರಾಷ್ಟ್ರೀಯ ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ!

ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ!

0

ನವದೆಹಲಿ: ಚಿತ್ರದುರ್ಗದ ಸಂಸದ ಗೋವಿಂದ್ ಕಾರಜೋಳ ಅವರು ಜನೌಷಧಿ ಯೋಜನೆಯು  ಸ್ಥಗಿತಗೊಳಿಸುವ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶೀಘ್ರದಲ್ಲೇ ಈ ಕೇಂದ್ರಗಳನ್ನು ಪುನರಾರಂಭಿಸುವಂತೆ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ “ಪ್ರಧಾನ ಮಂತ್ರಿ ಜನೌಷಧಿ ಯೋಜನೆ” ಬಡವರಿಗೆ ತಲುಪಬೇಕಾದ ಔಷಧವನ್ನು ಕಡಿಮೆ ಬೆಲೆಯಲ್ಲಿ ನೀಡಲು ಉದ್ದೇಶಿತವಾಗಿತ್ತು. ಆದರೆ ಇದೀಗ ಕರ್ನಾಟಕ ರಾಜ್ಯ ಸರ್ಕಾರ ಈ ಯೋಜನೆಯ ಪ್ರಭಾವವನ್ನು ಸ್ಥಗಿತಗೊಳಿಸಿದ್ದು, ಇದರಿಂದ ಬಡಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದರು.

ಸರ್ಕಾರದ ಈ ನಿರ್ಧಾರದ ಹಿಂದೆ ದುರುದ್ದೇಶ ಇರಬಹುದು, ಖಾಸಗಿಯವರಿಗೆ ಸಹಾಯ ಮಾಡಲು ಹೀಗೆ ಮಾಡಿರಬಹುದು. ಇದನ್ನು ನಾನು ಖಂಡಿಸುತ್ತೇನೆ. ಸಿದ್ದರಾಮಯ್ಯ ಅವರು ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಬಾರದು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಬಗ್ಗೆ ಮಾತನಾಡಿದ ಅವರು, ಮಳೆಯಿಂದ ರಾಜ್ಯಕ್ಕೆ ಹಾಗೂ ಬೆಂಗಳೂರಿಗೆ ಸಮಸ್ಯೆ ಆಗಿದೆ, ಜನ, ಜಾನುವಾರು, ರೈತರಿಗೆ ಸಮಸ್ಯೆಯಾಗಿದೆ. ಸರ್ಕಾರ ಕೂಡಲೇ ಸಮಸ್ಯೆ ಆಗಿರುವ ಜಿಲ್ಲೆಗೆ ನೂರು ಕೋಟಿಯಷ್ಟು ಪರಿಹಾರ ನೀಡಬೇಕು. ಬೆಂಗಳೂರು ಜನರ ಪಾಡು ನೀರಿನಲ್ಲಿ ಕೊಚ್ಚಿ ಹೋಗುತ್ತಿದೆ. ಕೂಡಲೇ ಬೆಂಗಳೂರಿಗರಿಗೆ ಪರಿಹಾರ ನೀಡಬೇಕು, ತುರ್ತು ಕಾಮಗಾರಿ ಜೊತೆಗೆ ಪರಿಹಾರ ನೀಡಬೇಕು. ರಸ್ತೆ ಚರಂಡಿ ಸರಿಪಡಿಸಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶದ ಬಗ್ಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕೆ ಸಮಾವೇಶ ಮಾಡುತ್ತಿದ್ದಾರೆ ಗೊತ್ತಿಲ್ಲ, ರಾಜ್ಯದಲ್ಲಿ ಅಭಿವೃದ್ಧಿಯಾಗಿಲ್ಲ, ರಸ್ತೆ ಚರಂಡಿ, ಯಾವ ಕಾಮಗಾರಿ ಕೆಲಸ ಮಾಡಿಲ್ಲ, 40% ಶಾಸಕರು ಕೆಲಸ ಆಗುತ್ತಿಲ್ಲ ಎಂದಿದ್ದಾರೆ. ಜೊತೆಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರು ಸಾಧನ ಸಮಾವೇಶಕ್ಕಿಂತ ಆತ್ಮಾವಲೋಕನ ಸಮಾವೇಶ ಮಾಡಿಕೊಳ್ಳಲಿ ಎಂದು ಟೀಕಿಸಿದರು.