ಮೈಸೂರು(Mysuru): ನಗರದಲ್ಲಿ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣ ಮಾಡಲು ಬೇಕಾದ ಡಿಪಿಆರ್ ಸಿದ್ಧಪಡಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕನಿಷ್ಠ 10 ಕೋಟಿ ಮೀಸಲಿಡುವಂತೆ ಸಂಸದ ಪ್ರತಾಪ ಸಿಂಹ ಮನವಿ ಮಾಡಿದ್ದಾರೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಈಚೆಗೆ ಮನವಿ ಸಲ್ಲಿಸಿದ ಅವರು, ನಗರದಲ್ಲಿ ಹಾಗೂ ಸುತ್ತಲೂ ಭವಿಷ್ಯದಲ್ಲಿ ಸಂಚಾರದಟ್ಟಣೆ ಸಮಸ್ಯೆಯಿಂದ ತೊಂದರೆಗೀಡಾಗಬಾರದು ಈ ಕ್ರಮ ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದರು.
ಇದಕ್ಕೆ ಸ್ಪಂದಿಸಿದ ಸಚಿವರು, ಕೊಡಲೇ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಕರೆಯುವಂತೆ ಮುಡಾ ಆಯುಕ್ ಜಿ.ಟಿ.ದಿನೇಶ್ಕುಮಾರ್ ಅವರಿಗೆ ಸೂಚಿಸಿದ್ದಾರೆ.
ಡಿಪಿಆರ್ ಸಿದ್ಧವಾದ ಮೇಲೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಪ್ರತಾಪ ತಿಳಿಸಿದ್ದಾರೆ.
ಮೇಯರ್ ಶಿವಕುಮಾರ್, ಮೈಮುಲ್ ನಿರ್ದೇಶಕ ಅಶೋಕ್, ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಇದ್ದರು.