ಬೆಂಗಳೂರು: ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಖಂಡಿಸಿ ಪ್ರತಿಭಟನೆಗೆ ಹೊರಟ್ಟಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಪೊಲೀಸರು ಅಲ್ಲಲ್ಲಿ ತಡೆಯುತ್ತಿದ್ದಾರೆ.
ಇದಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಿಂದ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ನೇತೃತ್ವದಲ್ಲಿ ಪ್ರತಿಭಟನೆಗೆ ನೂರಾರು ಕಾರ್ಯಕರ್ತರು ಸಜ್ಜಾಗಿದ್ದರು. ನಾಯಂಡಹಳ್ಳಿ ಜಂಕ್ಷನ್‌ನಿಂದ ಪ್ರತಿಭಟನೆಗೆ ಕಾರ್ಯಕರ್ತರು ಹೊರಡುವ ಮಾಹಿತಿ ತಿಳಿದಿದ್ದ ಪೊಲೀಸರು, ಹಲವು ಕಡೆ ತಡೆಯೊಡ್ಡಿದ್ದಾರೆ.