ಮನೆ ರಾಜ್ಯ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿ- ಕೆ.ಎಸ್. ಈಶ್ವರಪ್ಪ ಆರೋಪ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿ- ಕೆ.ಎಸ್. ಈಶ್ವರಪ್ಪ ಆರೋಪ

0

ಶಿವಮೊಗ್ಗ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದವರು ಭಾಗಿಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.

Join Our Whatsapp Group

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದವರು ಭಾಗಿಯಾಗಿದ್ದಾರೆ. ಮನೆಯಲ್ಲಿದ್ದ ಹೆಣ್ಣು ಮಕ್ಕಳನ್ನು ಬೀದಿಗೆ ತಂದಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಕುಟುಂಬದವರು ಭಾಗಿಯಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ವಾಲ್ಮೀಕಿ ಹಗರಣ ದೇಶದ ಗಮನ ಸೆಳೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಈವರೆಗೂ ರಾಜೀನಾಮೆ ನೀಡಿಲ್ಲ ಎಂದರು.