ಮನೆ ಕಾನೂನು ಮುಡಾ ಹಗರಣ : ಇಡಿಯಿಂದ 100 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು!

ಮುಡಾ ಹಗರಣ : ಇಡಿಯಿಂದ 100 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು!

0

ಬೆಂಗಳೂರು : ಜಾರಿ ನಿರ್ದೇಶನಾಲಯ (ಇಡಿ) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸೇರಿದ 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಈ ಬಗ್ಗೆ ಖುದ್ದು ಜಾರಿ ನಿರ್ದೇಶನಾಲಯವೇ ಟ್ವಿಟ್ಟರ್ ಎಕ್ಸ್ ನಲ್ಲಿ ಮಾಹಿತಿ ನೀಡಿದೆ. ಮುಡಾ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 400 ಕೋಟಿ ರೂ. ಮೌಲ್ಯದ ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಈ ಹಿಂದೆ 300 ಕೋಟಿ ರೂ. ಮೌಲ್ಯ 160 ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿತ್ತು.

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಿಎಂಎಲ್‌ಎ, 2002ರ ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರಿನ ಇಡಿ, 09-06-2025ರಂದು ರೂ. 100 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 92 ಮುಡಾ ಸೈಟ್‌ಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ.

ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು. ವಿವಿಧ ಕಾನೂನುಗಳು ಮತ್ತು ಸರ್ಕಾರಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮುಡಾ ಸೈಟ್‌ಗಳ ಹಂಚಿಕೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.