ಮನೆ ಕಾನೂನು ಮುಡಾ ಹಗರಣ: ಸಿಎಂಗೆ ಹೈಕೋರ್ಟ್​ ನೋಟಿಸ್​, ನ.26ಕ್ಕೆ ಮುಂದೂಡಿಕೆ

ಮುಡಾ ಹಗರಣ: ಸಿಎಂಗೆ ಹೈಕೋರ್ಟ್​ ನೋಟಿಸ್​, ನ.26ಕ್ಕೆ ಮುಂದೂಡಿಕೆ

0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐ ನಡೆಸುವಂತೆ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್​ 26ಕ್ಕೆ ಮುಂದೂಡಿದೆ.

Join Our Whatsapp Group

ಪ್ರಕರಣ ಸಂಬಂಧ ಈವರೆಗೆ ನಡೆದ ತನಿಖೆಯ ವರದಿಯನ್ನು ನವೆಂಬರ್​​ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.

ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಸ್ನೇಹಪ್ರಿಯ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಮಂಡನೆ ಮಾಡಿದರು. ಮತ್ತು ಲೋಕಾಯುಕ್ತ ಪರವಾಗಿ ರಾಜ್ಯ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿದರು.

ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ, ನ.25ರವರೆಗೆ ನಡೆದ ತನಿಖೆಯ ವಿವರ ಒದಗಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ, ಸಿಬಿಐ ಮತ್ತು ಲೋಕಾಯುಕ್ತ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ರಾಜ್ಯ ಅಭಿಯೋಜಕ ಬಿ.ಎನ್.ಜಗದೀಶ್‌ ಅವರು ಮನವಿ ಮಾಡಿಕೊಂಡರು. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜುಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.