ಮನೆ ರಾಜ್ಯ ಮುಡಾ ಹಗರಣ: ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ನಡೆಸಲು ಬಿಜೆಪಿ ತೀರ್ಮಾನ

ಮುಡಾ ಹಗರಣ: ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ನಡೆಸಲು ಬಿಜೆಪಿ ತೀರ್ಮಾನ

0

ಬೆಂಗಳೂರು: ಮುಡಾ ಹಗರಣದ ಹೋರಾಟ ತೀವ್ರಗೊಳಿಸಿರುವ ಬಿಜೆಪಿಯು ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.

Join Our Whatsapp Group

ವಿಧಾನಸಭೆ ಹಾಗೂ ಪರಿಷತ್​ಗಳಲ್ಲಿ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅನುಮತಿ ನಿರಾಕರಣೆ ಹಿನ್ನೆಲೆ ಮೈತ್ರಿಪಕ್ಷದ ಸದಸ್ಯರು ಗದ್ದಲ ನಡೆಸಿದ್ದರಿಂದ ಎರಡು ಸದನಗಳಲ್ಲಿ ಕಲಾಪ ಮುಂದೂಡಲಾಯಿತು‌. ಮುಂದಿನ ಹೋರಾಟದ ಕುರಿತಂತೆ ಸಭೆ ನಡೆಸಿ, ಹೊರಬಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮೇಲ್ಮನೆ ಸದಸ್ಯ ಸಿ. ಟಿ ರವಿ, ಮುಡಾ ಹಗರಣ ಸಂಬಂಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಜುಲೈ 28 ರಂದು ಹೆಚ್. ಡಿ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿ, ದಿನಾಂಕ ನಿಗದಿಪಡಿಸಲಾಗುವುದು. ಪಾದಯಾತ್ರೆ ರೂಪುರೇಷೆ, ಸ್ವರೂಪದ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಎನ್​ಡಿಎ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ ಎಂದು ಮಾಹಿತಿ ನೀಡಿದರು.

ಮುಡಾ ಹಗರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸುತ್ತಿದೆ‌. ತನಿಖೆ ಮಧ್ಯದಲ್ಲಿ ತಾನು ಅಕ್ರಮವೆಸಗಿಲ್ಲ ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಯಂಪ್ರೇರಿತವಾಗಿ ಕ್ಲೀನ್ ಚಿಟ್ ಪಡೆದಿದ್ದಾರೆ. ತನಿಖೆಗೂ ಮುನ್ನ‌ವೇ ಕ್ಲೀನ್ ಚಿಟ್ ಪಡೆದುಕೊಂಡರೆ ತನಿಖೆ ಯಾವ ರೀತಿಯಲ್ಲಿ ಸಾಗಲಿದೆ ಎಂದು‌ ಪ್ರಶ್ನಿಸಿದ ಸಿ ಟಿ ರವಿ, ಪಾರದರ್ಶಕ ತನಿಖೆ ನಡೆಯಬೇಕಾದರೆ ಸುಪ್ರೀಂ ಕೋರ್ಟ್​ ಅಥವಾ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಿಬಿಐ ತನಿಖೆ‌ ನಡೆಸಬೇಕು ಎಂದು ಹೇಳಿದರು.