ಮನೆ ರಾಜಕೀಯ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಅಸಮಾಧಾನ ಹೊರಹಾಕಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಅಸಮಾಧಾನ ಹೊರಹಾಕಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ

0

ಬೆಂಗಳೂರು(Bengaluru): ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಆಡಳಿತ ಪಕ್ಷದ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಾನೊಬ್ಬ ದಲಿತ ಶಾಸಕ ಎಂಬ ಕಾರಣದಿಂದ ಮೊನ್ನೆ ನನ್ನ ಕ್ಷೇತ್ರದಲ್ಲಿ  ನಡೆದ ಘಟನೆ ಸಂಬಂಧ ಸೌಜನ್ಯಕ್ಕೂ ಮಾತನಾಡಿಸಿ ವಿಷಾಧ ವ್ಯಕ್ತಪಡಿಸಿಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಯ ದಾಳಿಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬದವರನ್ನು ನೋಡಿ ಮಾತನಾಡಿಸಲು ಸಾಂತ್ವಾನ ಹೇಳಲು ತೆರಳಿದ್ದೆ. ಇದು ಸಣ್ಣ ಘಟನೆ ಅಲ್ಲ ಜನರು ನನಗೆ ದೊಣ್ಣೆಯಿಂದ ಹೊಡೆಯಲು ಬಂದಿದ್ದರು. ಕಲ್ಲಲ್ಲಿ ಹೊಡೆಯಲು ಬಂದಿದ್ರು, ದೊಣ್ಣೆಯಲ್ಲಿ ಹೊಡೆಯಲು ಬಂದಿದ್ರು, ಇದೊಂದು ಸಣ್ಣ ಘಟನೆ ಹೇಗೆ ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ

ನಾನು ದೂರು ಕೊಡಲಿಲ್ಲ. ನಾನು ಕುಮಾರಸ್ವಾಮಿ ಅಲ್ಲ.ನಾನೊಬ್ಬ ಶಾಸಕ ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದುವರೆಗೂ ನನ್ನ  ಮಾತನಾಡಿಸುವ ಕೆಲಸ ಮಾಡಿಲ್ಲ. ಸೌಜನ್ಯಕ್ಕೂ ಕರೆದು ಏನಾಯ್ತು ಅಂತ ಕೇಳಿಲ್ಲ ಜನಪ್ರತಿನಿಧಿಗಳಿಗೆ ಹೀಗೆ ಆದರೆ ಜನರ ಪರಿಸ್ಥಿತಿ ಎಲ್ಲಿಗೆ ಹೋಗಲಿದೆ ಎಂದರು.

ನಾನು ಆನೆ ಸಾಕಲು ಆಗುತ್ತಾ ಗೃಹ ಸಚಿವರು ಸಂಪೂರ್ಣವಾಗಿ ನನ್ನ ನಿರ್ಲಕ್ಷ್ಯ ಮಾಡಿದ್ದಾರೆ.ಇದುವರೆಗೂ ಒಂದ್ ಪೋನ್ ಮಾಡಿ ಏನಾಯ್ತು ಅಂತ ಕೇಳಿಲ್ಲ ಎಂದು ನೇರವಾಗಿ ಗೃಹ ಸಚಿವರ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಹಾಗೂ ಮಾಜಿ‌ ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ‌ಆರೋಗ್ಯದ ಬಗ್ಗೆ ಪೋನ್ ಮಾಡಿ ವಿಚಾರಿಸಿದ್ದಾರೆ. ನಾವು ಹಲ್ಲೆಗೆ ಒಳಪಡುವರು ಅಂತ ಗೃಹ ಸಚಿವರು ಸುಮ್ಮನೆ ಆಗಿರಬಹುದು ಎಂದರು.

ನನಗೆ ಬಹಳ ತೊಂದರೆ ಆಗಿದೆ, ಕೊಲೆ ಮಾಡಲು ಬಂದವರು, ಹುಚ್ಚು ನಾಯಿ ಅಟ್ಟಿಸಿಕೊಂಡು ಬಂದ ರೀತಿಯಲ್ಲಿ ಜನ ನನ್ನ ಅಟ್ಟಿಸಿಕೊಂಡು ಬಂದರು. ನಾನು ಅಂದು ಪ್ರಾಣ ಉಳಿಸಿಕೊಂಡಿದ್ದೇ ಹೆಚ್ಚು.ಬಟ್ಟೆ ಹೋದ್ರೆ ಹೋಯ್ತ, ಪ್ರಾಣ ಹೋದ್ರೆ ಏನು ಗತಿ ಎಂದರು..

ಸಿ.ಟಿ ರವಿ ಹಾಗೂ ಯಡಿಯೂರಪ್ಪ ಅವರು ತಾಳ್ಮೆಯಿಂದ ಇರುವಂತೆ ಹೇಳಿದ್ದಾರೆ. ನನ್ನ ವಿಚಾರದಲ್ಲಿ ಗೃಹ ಸಚಿವರು ಸರಿಯಾಗಿ ನಡೆದುಕೊಂಡಿಲ್ಲ. ಆನೆ ದಾಳಿ ನಡೆದೇ ನಡೆಯುತ್ತೆ, ಇನ್ನೂ ಆನೆ ದಾಳಿ ತಪ್ಪಲ್ಲ, ಕ್ಷೇತ್ರದಲ್ಲಿ ಏನಾದರೂ ಆದರೆ ಶಾಸಕರು ಸಾಂತ್ವನ ಹೇಳೋಕೆ ಹೋಗಬಾರದಾ ?  ಎಂದು ಪ್ರಶ್ನಿಸಿದರು.

ಹಿಂದಿನ ಲೇಖನಹಾಸನ ಜಿಲ್ಲೆಯಲ್ಲಿ ‌ಕಾಡಾನೆ ಹಾವಳಿ ತಡೆಗೆ ಕ್ರಮ: ಸಚಿವ ಕೆ.ಗೋಪಾಲಯ್ಯ
ಮುಂದಿನ ಲೇಖನನ. 28 ರಂದು ನಂಜನಗೂಡಿನಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ: ಜಿಲ್ಲಾಧಿಕಾರಿಗಳಿಂದ  ಸ್ಧಳ ಪರಿಶೀಲನೆ