ಚಿಕ್ಕಮಗಳೂರು: ಪಾವತಿಸಿರುವ ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ₹4.75 ಲಕ್ಷ ಹಿಂದಿರುಗಿಸುವಂತೆ ಕನ್ನಡದ ಪೂಜಾರಿ ಎಂದು ಪ್ರಸಿದ್ಧವಾಗಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದೆ.
ಹಿರೇಮಗಳೂರು ಕೋದಂಡ ರಾಮಚಂದ್ರ ದೇಗುಲಕ್ಕೆ 2013-14ನೇ ಸಾಲಿನಿಂದ ಈವರೆಗೆ ₹5.10 ಲಕ್ಷ ಸಂಗ್ರಹವಾಗಿದೆ. ಅದೇ ಅವಧಿಯಲ್ಲಿ ತಮಗೆ ತಸ್ತೀಕ್ ಮೊತ್ತವಾಗಿ ಒಟ್ಟು ₹8.10 ಲಕ್ಷ ಪಾವತಿಸಲಾಗಿದೆ.
ದೇವಾಲಯದ ವಾರ್ಷಿಕ ಆದಾಯಕ್ಕಿಂತ ವೆಚ್ಚ ಜಾಸ್ತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಮೊತ್ತಕ್ಕಿಂತ ಹೆಚ್ಚುವರಿ ತಮ್ಮ ಖಾತೆಗೆ ಜಮಾ ಮಾಡಲಾಗಿದೆ. ಆದ್ದರಿಂದ ಬಾಕಿ ₹4.74 ಲಕ್ಷ ಹಿಂದಿರುಗಿಸಬೇಕು ಎಂದು ನೋಟಿಸ್ ನಲ್ಲಿ ತಿಳಿಸಿದೆ.