ಮನೆ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣ ಆ ದೇಗುಲಕ್ಕೇ ಬಳಕೆಯಾಗಬೇಕು: ಸಚಿವ ರಾಮಲಿಂಗಾ ರೆಡ್ಡಿ

ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣ ಆ ದೇಗುಲಕ್ಕೇ ಬಳಕೆಯಾಗಬೇಕು: ಸಚಿವ ರಾಮಲಿಂಗಾ ರೆಡ್ಡಿ

0

ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ  ಬಳಸಬೇಕು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಇಂದು  ಧಾರವಾಡದ ನೂತನ ಸಿಬಿಟಿ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಬರುವ ಜನರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಮುಜರಾಯಿ ಇಲಾಖೆಗೆ ಆದಾಯ ಹೆಚ್ಚಿಗೆ ಬರುತ್ತಿದೆ ಎಂಬ ಪ್ರಶ್ನೆ ಬರುವುದಿಲ್ಲ.

ಮುಜರಾಯಿ ಇಲಾಖೆ ಅಡಿಯಲ್ಲಿ 34 ಸಾವಿರ ದೇವಸ್ಥಾನಗಳಿವೆ. ದೇವಸ್ಥಾನಗಳ ಹುಂಡಿಗೆ ಸಾಕಷ್ಟು ಹಣ ಬರುತ್ತಿದೆ. ಒಂದು ದೇವಸ್ಥಾನದ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸುವುದಿಲ್ಲ. ಆಯಾ ದೇವಸ್ಥಾನದ ಹುಂಡಿ ಹಣ ಅದೇ ದೇವಸ್ಥಾನಕ್ಕೆ ಸೇರುತ್ತದೆ.