ಬೆಂಗಳೂರು (Bengaluru)- ಮಾಜಿ ಎಂಎಲ್‌ಸಿ ಹಾಗೂ ಕಾಂಗ್ರೆಸ್ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.
ಚಂದ್ರು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಚಂದ್ರು ಅವರು ರಾಜ್ಯಸಭಾ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಕ್ಕಿರಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ನಟ, ರಾಜಕಾರಣಿ ಚಂದ್ರು ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಆಗಿದ್ದಾರೆ.
ಈ ಬಗ್ಗೆ ಮಾತನಾಡಿ, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ತೋರಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.