ಮನೆ ಸುದ್ದಿ ಜಾಲ ಮುಳ್ಳಯ್ಯನಗಿರಿ : ಅಕ್ರಮ ರಸ್ತೆ ನಿರ್ಮಾಣ ̧ ಗುಡ್ಡದ ಮಣ್ಣು ಅಕ್ರಮ ಸಾಗಾಣೆಗೆ

ಮುಳ್ಳಯ್ಯನಗಿರಿ : ಅಕ್ರಮ ರಸ್ತೆ ನಿರ್ಮಾಣ ̧ ಗುಡ್ಡದ ಮಣ್ಣು ಅಕ್ರಮ ಸಾಗಾಣೆಗೆ

0

ಚಿಕ್ಕಮಗಳೂರು  : ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿ‌ನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಸೇರಿದ ಮುಳ್ಳಯ್ಯನಗಿರಿ-ಬಾಬಾಬುಡನ್ ಗಿರಿ ಶ್ರೇಣಿ ಪ್ರದೇಶದಲ್ಲಿ ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳನ್ನು ಬಳಸಿ ಹೊಸ ರಸ್ತೆಗಳ ನಿರ್ಮಾಣ ನಡೆಯುತ್ತಿದೆ ಎನ್ನಲಾಗಿದೆ. ಶೋಲಾ ಕಾಡುಗಳು ಹಾಗೂ ಹುಲ್ಲುಗಾವಲು ಪ್ರದೇಶಗಳನ್ನು ಬಗೆದು ರಸ್ತೆ ನಿರ್ಮಿಸಲಾಗುತ್ತಿದ್ದು, ಇದರಿಂದ ಪರಿಸರ ವ್ಯವಸ್ಥೆಗೆ ಗಂಭೀರ ಹಾನಿಯಾಗುವ ಸಾಧ್ಯತೆಯಿದೆ ಎಂದು ಪರಿಸರ ಹೋರಾಟಗಾರರು ಎಚ್ಚರಿಸಿದ್ದಾರೆ.ಸ್ಥಳೀಯರಾದ ವಿಜಯಮಾರ್ ಮಾತಾಡಿ ಕೆಲವು ಪ್ರದೇಶಗಳಲ್ಲಿ ಗುಡ್ಡಗಳನ್ನು ಬಗೆದು ಮಣ್ಣು ಮತ್ತು ಅದಿರು ಸಾಗಾಣೆ ನಡೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಚಟುವಟಿಕೆಗಳು ರೆಸಾರ್ಟ್‌ಗಳು, ಹೋಮ್‌ಸ್ಟೇಗಳು ಹಾಗೂ ಇತರ ಪ್ರವಾಸೋದ್ಯಮ ಸಂಬಂಧಿತ ನಿರ್ಮಾಣಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಡೆಯುತ್ತಿವೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ ಎಂಬುದ್ದಾಗಿದೆ.

ಈ ಕುರಿತು ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅರಣ್ಯೇತರ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆಗೆ ಸಿಗಲೇ ಇಲ್ಲ, ಪರಿಸರವಾದಿ ವಿರೇಶ್ ಮಾತಾಡಿ ಪ್ರಕಾರ, ಈ ಪ್ರದೇಶವು ಪ್ರಸ್ತಾಪಿತ ಮುಳ್ಳಯ್ಯನಗಿರಿ ಸಂರಕ್ಷಣಾ ಮೀಸಲು ವ್ಯಾಪ್ತಿಯಲ್ಲಿದ್ದು, ಇಲ್ಲಿ ಅರಣ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಆದರೂ ಭಾರೀ ಯಂತ್ರಗಳ ಬಳಕೆಯಿಂದ ರಸ್ತೆ ನಿರ್ಮಾಣ ನಡೆಯುತ್ತಿರುವುದು ಪರಿಸರ ಸಂರಕ್ಷಣಾ ನಿಯಮಗಳ ಉಲ್ಲಂಘನೆಯಾಗಿರಬಹುದು ಎಂದು ಆರೋಪಿಸಿದ್ದಾರೆ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ಭೂಕುಸಿತ ಸಂಭವಿಸುವ ಅಪಾಯ ಹೆಚ್ಚಾಗಿದೆ.

ಆದರಿಂದ ಮೃದುವಾದ ಮಣ್ಣಿನ ಪ್ರದೇಶಗಳಲ್ಲಿ ಜೆಸಿಬಿ ಮತ್ತು ಹಿಟಾಚಿ ಯಂತ್ರಗಳ ಕಾರ್ಯಾಚರಣೆ ಭೂಸ್ಥಿರತೆಗೆ ಧಕ್ಕೆ ತರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಇದೇ ವೇಳೆ, ಅಕ್ರಮ ರಸ್ತೆ ನಿರ್ಮಾಣ, ಮಣ್ಣು ಮತ್ತು ಅದಿರು ಸಾಗಾಣೆ ಕುರಿತು ಅರಣ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಪರಿಸರ ಸೂಕ್ಷ್ಮ ವಲಯದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಸಂಬಂಧಿತ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ ಎಂದು ಅವರು ಕಿಡಿಕಾರಿದ್ದಾರೆ.ಅಕ್ರಮ ರಸ್ತೆ ನಿರ್ಮಾಣ ಹಾಗೂ ಗುಡ್ಡ ಬಗೆಯುವಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಂತ್ರಗಳನ್ನು ವಶಕ್ಕೆ ಪಡೆದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಅರಣ್ಯ ಸಂರಕ್ಷಣಾ ಕಾಯ್ದೆ ಹಾಗೂ ಇತರೆ ಪರಿಸರ ಕಾನೂನುಗಳಡಿ ಪ್ರಕರಣ ದಾಖಲಿಸಬೇಕು ಎಂದು ಪರಿಸರ ಸಂಘಟನೆಗಳು ಒತ್ತಾಯಿಸಿವೆ ಎಂದು ತಿಳಿಸಿದೆ.