ಮನೆ ಅಪರಾಧ ಮುಂಬೈ: ಪ್ರಮುಖ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ- 5 ಕೋಟಿ ಬೇಡಿಕೆ

ಮುಂಬೈ: ಪ್ರಮುಖ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ- 5 ಕೋಟಿ ಬೇಡಿಕೆ

0
ಸಾಂದರ್ಭಿಕ ಚಿತ್ರ

ಮುಂಬೈ(Mumbai): ನಗರದ ಪ್ರಮುಖ ಹೋಟೆಲೊಂದಕ್ಕೆ ಬಾಂಬ್ ದಾಳಿ ಬೆದರಿಕೆ ಕರೆ ಬಂದಿದ್ದು, ಬಾಂಬ್ ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ ಇಟ್ಟಿರುವ ಮಾಹಿತಿ ಲಭ್ಯವಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ಹೋಟೆಲ್‌ನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದು, ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸಬೇಕಿದ್ದರೆ  5 ಕೋಟಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ.

ಮುಂಬೈ ಪೊಲೀಸರು ಶಹರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಯು/ಎಸ್ 336, 507ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಮೂರು ದಿನಗಳ ಹಿಂದಷ್ಟೇ, ಪಾಕಿಸ್ತಾನದ ಕೋಡ್‌ ಒಳಗೊಂಡ ದೂರವಾಣಿ ಸಂಖ್ಯೆಯಿಂದ ಮುಂಬೈ ಪೊಲೀಸರಿಗೆ 26/11 ಮಾದರಿ ದಾಳಿ ನಡೆಸುವ ಬೆದರಿಕೆಯ ಸಂದೇಶ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಸಮೀಪದ ವಿರಾರ್‌ನಲ್ಲಿ ಓರ್ವನನ್ನು ಬಂಧಿಸಲಾಗಿತ್ತು.