ಮನೆ ರಾಜ್ಯ ಮುಂಬೈ: ರೆಸ್ಟೋರೆಂಟ್​ ನಲ್ಲಿ ಅಗ್ನಿ ಅವಘಡ, ಓರ್ವ ಸಾವು

ಮುಂಬೈ: ರೆಸ್ಟೋರೆಂಟ್​ ನಲ್ಲಿ ಅಗ್ನಿ ಅವಘಡ, ಓರ್ವ ಸಾವು

0

ಮುಂಬೈ: ಮುಂಜಾನೆ ಮುಂಬೈನ ಗ್ರಾಂಟ್ ರಸ್ತೆಯ ಕಮಾತಿಪುರದ ರೆಸ್ಟೋರೆಂಟ್‌ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಂಬೈ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಆವರಣದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ನಂತರ 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಒಟ್ಟು 16 ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಬೆಂಕಿಯ ಕಾರಣ, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡಲಾಗಿದೆ. ಇಲ್ಲಿಯವರೆಗೆ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮುಂಬೈ ಅಗ್ನಿಶಾಮಕ ಸೇವೆ ತಿಳಿಸಿದೆ.

ಒಬ್ಬ ಅಪರಿಚಿತ ವ್ಯಕ್ತಿಯ ಸುಟ್ಟ ದೇಹವು ಆವರಣದಲ್ಲಿನ ಸ್ನಾನಗೃಹದಲ್ಲಿ ಕಂಡುಬಂದಿದೆ, ಯಾವುದೇ ಗಾಯಾಳು ಅಥವಾ ಕಾಣೆಯಾದ ವ್ಯಕ್ತಿಯ ಬಗ್ಗೆ ವಿಚಾರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮತಿಪುರದಲ್ಲಿ ಬೆಂಕಿ ಹತೋಟಿಗೆ ಬಂದರೂ ಹಿಂಬದಿಯಲ್ಲಿ ಮತ್ತೆ ಹೊಗೆ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಜೆಸಿಬಿ ಸಹಾಯದಿಂದ ಮುಂದೆ ಸಾಗಲು ಯತ್ನಿಸುತ್ತಿದ್ದಾರೆ.

ಹಿಂದಿನ ಲೇಖನ01 ಡೇಟಾಬೇಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಮುಂದಿನ ಲೇಖನಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ಕಾರ ಸರ್ವ ಸನ್ನದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ