ಮನೆ ರಾಜಕೀಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ​ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ​ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

0

ಬೆಂಗಳೂರು: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್​ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಘೋಷಣೆಯಾಗುತ್ತಿರುವ ಬೆನ್ನಲ್ಲೇ ಚುನಾವಣಾ ಪ್ರಕ್ರಿಯೆಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ.

Join Our Whatsapp Group

ಆ ಮೂಲಕ ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ ಚುನಾವಣಾ ಪ್ರಕ್ರಿಯೆ ಆರಂಭಿಸಲಿದೆ.

ಉಸ್ತುವಾರಿಗಳ ಪಟ್ಟಿ ಹೀಗಿದೆ

  • ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ: ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್​.
  • ಬೀದರ್, ಕಲಬುರಗಿ ನಗರ, ಕಲಬುರಗಿ ಗ್ರಾಮಾಂತರ ಮತ್ತು ಯಾದಗಿರಿಗೆ ರಾಜ್ಯ ಕಾರ್ಯದರ್ಶಿ ಡಾ. ಶೈಲೇಂದ್ರ ಬೆಲ್ದಾಳೆ
  • ಮೈಸೂರು, ಚಾಮರಾಜನಗರ ಮತ್ತು ಹಾಸನಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ
  • ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಗೆ ಮಾಜಿ‌ ಎಂಎಲ್​ಸಿ ಕ್ಯಾ. ಗಣೇಶ್ ಕಾರ್ಣಿಕ್.
  • ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ಮಧುಗಿರಿಗೆ ಎಂಎಲ್​ಸಿ ಎನ್. ರವಿಕುಮಾರ್​
  • ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಮತ್ತು ವಿಜಯಪುರಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ
  • ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರಕನ್ನಡಕ್ಕೆ ಶಾಸಕ ಚನ್ನಬಸಪ್ಪ ಅವರನ್ನು ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ.

ರಾಜ್ಯದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಮೀಸಲು ವರ್ಗೀಕರಣದ ಅಧಿಸೂಚನೆ ಪ್ರಕಟಿಸಿತ್ತು.

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಮಾದರಿಯಾದ ಗುಣಕಿ ಗ್ರಾಮ ಪಂಚಾಯ್ತಿ

ಗ್ರಾಮದ ಗುರು ಹಿರಿಯರು ಕೂಡಿಕೊಂಡು ವಿಜಯಪುರ ತಾಲೂಕಿನ ಗುಣಕಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆಯನ್ನು ಮಾಡಿದ್ದಾರೆ. ಆ ಮೂಲಕ ವಿಜಯಪುರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಗುಣಕಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸರ್ಕಾರದ ಅಧಿಸೂಚನೆಯಂತೆ ಮೀಸಲಾತಿ ಅನ್ವಯ ಹಿರಿಯರು ಯಾರಿಗೆ ಅಧಿಕಾರ ನೀಡಬೇಕೆಂದು ತೀರ್ಮಾನಿಸುತ್ತಾರೆ.