“ನೀ ನಂಗೆ ಅಲ್ಲವಾ’ ಎಂಬ ಸಿನಿಮಾವೊಂದು ಆರಂಭವಾಗುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಟೈಟಲ್ ಅನ್ನು ನಟ ಶ್ರೀಮುರಳಿ ಅನಾವರಣಗೊಳಿಸಿದರು.
ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಮನೋಜ್ ಪಿ ನಡಲುಮನೆ ನಿರ್ದೇಶಿಸುತ್ತಿದ್ದಾರೆ.
ರಾಹುಲ್ ಅರ್ಕಾಟ್ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಹಿಂದೆ ಆನಾ ಹಾಗೂ ಮೇರಿ ಚಿತ್ರಗಳನ್ನು ನಿರ್ದೇಶಿಸಿದ್ದ ಮನೋಜ್ ಪಿ ನಡಲುಮನೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಮನೋಜ್ ಅವರೆ ಬರೆದಿದ್ದಾರೆ.
ಸೂರಜ್ ಜೋಯಿಸ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ನಾಗೇಂದ್ರ ಉಜ್ಜನಿ ಅವರ ಸಂಕಲನ ಈ ಚಿತ್ರಕ್ಕಿದೆ. ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮೊದಲ ಚಿತ್ರ ನೀ ನಂಗೆ ಅಲ್ಲವಾ ಸಂಕ್ರಾಂತಿ ನಂತರ ಚಿತ್ರೀಕರಣ ಆರಂಭವಾಗಲಿದೆ.