ಮನೆ ರಾಜ್ಯ ಬಿಜೆಪಿ ಕಾರ್ಯಕರ್ತನ ಹತ್ಯೆ: ಶೀಘ್ರವೇ ದುಷ್ಕರ್ಮಿಗಳ ಬಂಧನ; ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ಕಾರ್ಯಕರ್ತನ ಹತ್ಯೆ: ಶೀಘ್ರವೇ ದುಷ್ಕರ್ಮಿಗಳ ಬಂಧನ; ಸಿಎಂ ಬಸವರಾಜ ಬೊಮ್ಮಾಯಿ

0

ಬೆಂಗಳೂರು (Bengaluru): ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದ ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದಿದ್ದಾರೆ.

ವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸಕಾ೯ರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಗೃಹಸಚಿವರ ಜತೆ ಚರ್ಚೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಯುವ ಮುಖಂಡ, ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಇದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಮಟ್ಟಹಾಕುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಪ್ರವೀಣ್ ಹತ್ಯೆ ವಿಚಾರದಲ್ಲಿ ಯಾರೂ ಉದ್ವೇಗಕ್ಕೊಳಗಾಗುವುದು ಬೇಡ. ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಶಾಂತಿ ಪ್ರಿಯರು. ಕೊಲೆ ವಿಚಾರದಲ್ಲಿ ಆರೋಪಿಗಳ ಮಟ್ಟಹಾಕುವ ಪ್ರಯತ್ನ ಶೀಘ್ರದಲ್ಲೇ ಆಗಲಿದೆ ಎಂದರು.

ಬೆಳ್ಳಾರೆಯ ಹಿಂದುತ್ವಪರ ಸಂಘಟನೆಗಳ ಮುಖಂಡ, ಬಿಜೆಪಿ ಜಿಲ್ಲಾ ಯುವಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು(32) ಅವರನ್ನು ಮಂಗಳವಾರ ರಾತ್ರಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳು ತಲವಾರಿನಿಂದ ಕಡಿದು ಬರ್ಬರವಾಗಿ ಕೊಲೆಗೈದಿದ್ದಾರೆ.  ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.