ಮನೆ ರಾಜ್ಯ ದಲಿತ ಯುವಕನ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ; ಸಚಿವ ಮುರುಗೇಶ್‌ ನಿರಾಣಿ

ದಲಿತ ಯುವಕನ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ; ಸಚಿವ ಮುರುಗೇಶ್‌ ನಿರಾಣಿ

0

ಬೆಂಗಳೂರು (Bengaluru)- ದಲಿತ ಯುವಕನನ್ನು ಹತ್ಯೆಗೈದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದರಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣವೇ ಇಬ್ಬರನ್ನು ಬಂಧಿಸಿದ್ದಾರೆ. ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಯೇ ತಿರುತ್ತೇವೆ ಎಂದರು.

ನಮ್ಮ ಪೊಲೀಸರು ಸಮರ್ಥರಾಗಿದ್ದರಿಂದಲೇ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾನು  ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿಸಿದ್ದೆ. ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು.

ಪ್ರತಿಪಕ್ಷಗಳು ಸಾವಿನ ಪ್ರಕರಣವನ್ನು ಸಹ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ದುರದೃಷ್ಟಕರ. ನಾವು ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಿ , ಕಾನೂನು ಪ್ರಕಾರವೇ ಆರೋಪಿಗಳಿಗೆ ಶಿಕ್ಷೆಯಾಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಕೆಲವರು ಇದರಲ್ಲೂ ಲಾಭನಷ್ಟದ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.