ಮನೆ ಅಪರಾಧ ಮುರುಘಾ ಮಠದಲ್ಲಿ ಪೋಟೋ ಕಳವು ಪ್ರಕರಣ: ಮಾಜಿ ಆಡಳಿತಾಧಿಕಾರಿಯ ಬಂಧನ

ಮುರುಘಾ ಮಠದಲ್ಲಿ ಪೋಟೋ ಕಳವು ಪ್ರಕರಣ: ಮಾಜಿ ಆಡಳಿತಾಧಿಕಾರಿಯ ಬಂಧನ

0

ಚಿತ್ರದುರ್ಗ(Chitradurga): ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ಫೋಟೊ ತೆಗೆಯಲು ಬಸವರಾಜನ್ ಪ್ರಚೋದನೆ ಮಾಡಿದ್ದಾರೆ ಎಂಬ ಆರೋಪವಿದ ಮೇರೆಗೆ ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಶ್ರೀನಿವಾಸ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೂ ಶೋಧ ನಡೆಸಲಾಗಿದೆ.

ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಅ.6ರಂದು ಕಳುವಾಗಿದ್ದವು.  ಮಠಕ್ಕೆ ಗಣ್ಯರು ಭೇಟಿ ನೀಡಿದ ಸಂದರ್ಭದಲ್ಲಿ ಮುರುಘಾ ಶರಣರು ತೆಗೆಸಿಕೊಂಡ ಫೋಟೊಗಳನ್ನು ರಾಜಾಂಗಣದಲ್ಲಿ ಹಾಕಲಾಗಿತ್ತು. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದ ಆಧಾರದ ಮೇರೆಗೆ ನ.7ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಹಿಂದಿನ ಲೇಖನಅಂಡಮಾನ್‌ ಮತ್ತು ನಿಕೋಬರ್ ದ್ವೀಪದಲ್ಲಿ ಭೂಕಂಪ
ಮುಂದಿನ ಲೇಖನಹಿಂದೂ ಧರ್ಮವನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಕಾಂಗ್ರೆಸ್: ಸಿಎಂ ಬೊಮ್ಮಾಯಿ