ಮೈಸೂರು(Mysuru): ಮುರುಘಾ ಮಠದಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒಡನಾಡಿ ಸಂಸ್ಥೆ ಒತ್ತಾಯಿಸಿದೆ.
ಈ ಬಗ್ಗೆ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ಸ್ಟ್ಯಾನ್ಲಿ ಮತ್ತು ಪರಶು, ಸ್ವಾಮೀಜಿ ವಿರುದ್ಧ ಈಗಾಗಲೇ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಕಾರಣದಿಂದ ನ್ಯಾಯಾಂಗ ತನಿಖೆಗೆ ಒಳಪಡಬೇಕು. ನಾಯಿ ಸತ್ತಾಗ ಕಣ್ಣೀರಿಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಣ್ಮಕ್ಕಳ ಕಣ್ಣೀರಿಗೆ ಧ್ವನಿಯಾಗಿ, ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.
ಒಡನಾಡಿ ಸಿಬ್ಬಂದಿಗೆ ಬೆದರಿಕೆ ಕರೆ: ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ಸಂಪರ್ಕಕ್ಕೆ ಬರುತ್ತಿದ್ದಂತೆಯೇ, ಸಂಸ್ಥೆಯ ಸಿಬ್ಬಂದಿಯ ಮೇಲೆ ನಿರಂತರ ಒತ್ತಡ, ಬೆದರಿಕೆ ಕರೆಗಳು ಬಂದಿವೆ ಎಂಬ ಮಾಹಿತಿ ಲಭ್ಯವಾಗಿದೆ.