ಮನೆ ರಾಜ್ಯ ಮುರುಘಾ ಶರಣರ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ

ಮುರುಘಾ ಶರಣರ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ

0

ಚಿತ್ರದುರ್ಗ(Chitradurga): ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿತರಾಗಿದ್ದೆ ಶಿವಮೂರ್ತಿ ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಹೆಚ್ಚಿನ ಆರೋಗ್ಯ ಪರೀಕ್ಷೆಗಾಗಿ ತೀವ್ರನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಹೃದಯ ಪರೀಕ್ಷೆಯ ವರದಿ ಆಧರಿಸಿ ಚಿಕಿತ್ಸೆ ಬಗ್ಗೆ ವೈದ್ಯರು ನೀರ್ಧಾರ ಕೈಗೊಳ್ಳಲಿದ್ದಾರೆ. ಜಿಲ್ಲಾ ಕಾರಾಗೃಹದಲ್ಲಿದ್ದ ಅವರ ಆರೋಗ್ಯದಲ್ಲಿ ಬೆಳಿಗ್ಗೆ 9ಕ್ಕೆ ಏರುಪೇರು ಕಾಣಿಸಿಕೊಂಡಿದೆ.

ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಜಿಲ್ಲಾ ಆಸ್ಪತ್ರೆಗೆ ಬೆಳಿಗ್ಗೆ 9.30 ಕರೆತಂದು ಹೊರರೋಗಿ ಚಿಕಿತ್ಸಾ ಘಟಕದಲ್ಲಿ ತಪಾಸಣೆ ನಡೆಸಲಾಯಿತು.

ವೈದ್ಯಾಧಿಕಾರಿ ಶಿವಕುಮಾರ, ವೈದ್ಯೆ ಲೀಲಾ ರಾಘವನ್ ಅವರ ಸಲಹೆ ಮೇರೆಗೆ ಸೀಟಿ ಸ್ಕ್ಯಾನ್, ಆಲ್ಟ್ರಾಸೌಂಡ್, ರಕ್ತ ಪರೀಕ್ಷೆ ಸೇರಿದಂತೆ ಇತರ ಪರೀಕ್ಷೆಗಳನ್ನು ನಡೆಸಲಾಗಿದೆ.

ಹೃದಯ ಸಂಬಂಧಿ ಸಮಸ್ಯೆ ಪತ್ತೆಯಾಗಿದ್ದರಿಂದ ತಜ್ಞ ವೈದ್ಯರ ಸಲಹೆ ಪಡೆಯಲಾಗುತ್ತಿದೆ. ದಾವಣಗೆರೆಯಿಂದ ವೈದ್ಯರನ್ನು ಕರೆಸಲಾಗುತ್ತಿದೆ ಎಂಬ ಮಾಹಿತಿ ಇದೆ.